Click here to Download MyLang App

ಪಿ. ಲಂಕೇಶ್ ಅವರ ಆಯ್ದ ಕಥೆಗಳು,  ಪಿ. ಲಂಕೇಶ್,  P. Lankesh,  P Lankesh Avara Aayda Kathegalu,P Lankesh Avara Ayda Kathegalu,P Lankesh Avara Aida Kathegalu,

ಪಿ. ಲಂಕೇಶ್ ಅವರ ಆಯ್ದ ಕಥೆಗಳು (ಇಬುಕ್)

e-book

ಪಬ್ಲಿಶರ್
ಪಿ. ಲಂಕೇಶ್
ಮಾಮೂಲು ಬೆಲೆ
Rs. 80.00
ಸೇಲ್ ಬೆಲೆ
Rs. 80.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಕೆ.ವಿ. ಸುಬ್ಬಣ್ಣ ನೆನಪಿನ ’ಮೊದಲ ಓದು’ ಪುಸ್ತಕ ಮಾಲೆ

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ಪಿ. ಲಂಕೇಶ

ಪಿ. ಲಂಕೇಶರು 8 ಮಾರ್ಚ್ 1935ರಂದು ಶಿವಮೊಗ್ಗ ಜಿಲ್ಲೆಯ ಕೊನಗವಳ್ಳಿ ಗ್ರಾಮದ ನಂದಿಬಸಪ್ಪ ಮತ್ತು ದೇವೀರಮ್ಮ ದಂಪತಿಗಳ ಪುತ್ರನಾಗಿ ಜನಿಸಿದರು. ಇವರು ತಮ್ಮ ಶಿಕ್ಷಣವನ್ನು ಶಿವಮೊಗ್ಗ, ಬೆಂಗಳೂರುಗಳಲ್ಲಿ ಮಾಡಿ ಮೈಸೂರಿನ ಮಹಾರಾಜಾ ಕಾಲೇಜಿನಿಂದ ಇಂಗ್ಲೀಷ್ ಎಂ.ಎ. ಪದವಿ ಪಡೆದರು. ಇವರು 1959ರಿಂದ 1962ರವರೆಗೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ, 1962ರಿಂದ 1965ರವರೆಗೆ ಸೆಂಟ್ರಲ್ ಕಾಲೇಜಿನಲ್ಲಿ ಹಾಗೂ ಸರ್ಕಾರಿ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಒಂದು ವರ್ಷ, 1966ರಿಂದ 1978ರವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಲಂಕೇಶ್ ಪತ್ರಿಕೆಯನ್ನು ಶುರುಮಾಡಿದರು. ಇವರ ‘ಕಲ್ಲು ಕರಗುವ ಸಮಯ’ ಕೃತಿಗೆ 1993ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿತು. 1986ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಲಭಿಸಿತು. ‘ಪಲ್ಲವಿ’ ಚಲನಚಿತ್ರ ನಿರ್ದೇಶನಕ್ಕೆ ರಾಷ್ಟ್ರಪ್ರಶಸ್ತಿ ಲಭಿಸಿತು. ಇವರು 25 ಜನವರಿ 2000ದಂದು ನಿಧನರಾದರು.

 

ಪುಟಗಳು: 176

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
B
Bhargavi v b
ನಮಗೆ ಬುಕ್ ಬಂದಿಲ್ಲ ಸರ್

ಮತ್ತೆ ನೀವು ಕಳುಹಿಸಬಹುದು
ನಮ್ಮ ಫೋನ್ ನಂಬರ್ ತಪ್ಪಾಗಿದೆ ಅದರಿಂದ ನಮಗೆ ಬುಕ್ ಸಿಕ್ಕಿಲ್ಲ
74832 13564 ಈ ನಂಬರ್ ಗೆ ಕಳುಹಿಸಿ ವಿಳಾಸ ಇದೆ
ಅಲ್ಲಿಗೆ ಹೋಗಿ ಕರೆ ಮಾಡಿ