Click here to Download MyLang App

ಸಕ್ಕರೆ ಗೊಂಬೆ,  ವಿವೇಕ ಶಾನಭಾಗ,    Vivek Shanbhag,  Sakkare Gombe,

ಸಕ್ಕರೆ ಗೊಂಬೆ (ಇಬುಕ್)

e-book

ಪಬ್ಲಿಶರ್
ವಿವೇಕ ಶಾನಭಾಗ
ಮಾಮೂಲು ಬೆಲೆ
Rs. 70.00
ಸೇಲ್ ಬೆಲೆ
Rs. 70.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಈಚಿನ ಕನ್ನಡ ಕಥಾ ಸಾಹಿತ್ಯದಲ್ಲಿ ವಿವೇಕ ಶಾನಭಾಗ ಅವರ ಕಥೆಗಳು ತಮ್ಮ ಒಂದು ವಿಶಿಷ್ಟ ಲಕ್ಷಣದಿಂದ ಗಮನ ಸೆಳೆಯುತ್ತಿವೆ. ಇದುವರೆಗೂ ನಮ್ಮ ಕಥನ ಸಾಹಿತ್ಯವು ಹಳ್ಳಿ-ಪೇಟೆ, ಬಾಲ್ಯ-ಯೌವನ, ಸಮುದಾಯ-ವ್ಯಕ್ತಿ, ಧರ್ಮ-ವಿಜ್ಞಾನ, ವಸಾಹತೀಕರಣ - ಇಂಥ ವಸ್ತುಗಳನ್ನೇ ಹೆಚ್ಚಾಗಿ ಕೇಂದ್ರೀಕರಿಸಿಕೊಂಡಿದ್ದರೆ ವಿವೇಕರ ಈಚಿನ ಕಥೆಗಳಲ್ಲಿ ಜಾಗತೀಕರಣಗೊಂಡ ಉದ್ಯಮಲೋಕವೊಂದರ ಚಿತ್ರವು ಅನಾವರಣಗೊಳ್ಳಲು ಆರಂಭವಾಗಿದೆ. ಆ ಲೋಕವನ್ನು ಗ್ರಹಿಸಲು ಹೊಸ ದಾರಿಗಳನ್ನು ಹುಡುಕುವುದು ಈ ಕಥನದ ಹಿಂದಿರುವ ಒಂದು ಸ್ಥಾಯಿ ಉದ್ದೇಶವಾಗಿ ನಮಗೆ ಕಾಣುತ್ತದೆ. ಪ್ರಸ್ತುತ ನಾಟಕವು ಅಂಥ ಒಂದು ಉದ್ದೇಶದ ಇನ್ನೊಂದು ಹೆಜ್ಜೆ ಎಂದು ಕಾಣಿಸಲು ಸಾಧ್ಯವಿದೆ.

...'ಸಕ್ಕರೆ ಗೊಂಬೆ' ಪೂರ್ಣವಾಗಿ ಇಂಥ ಉದ್ಯಮಲೋಕದ ಕೇಂದ್ರದಲ್ಲಿಯೇ ಘಟಿಸುವ ಒಂದು ನಾಟಕ. ಎನ್‌ಕೆ ಎಂದು ಪರಿಚಿತನಾಗಿರುವ ನಂದಕಿಶೋರ ಬಹುದೊಡ್ಡ ಕೈಗಾರಿಕೋದ್ಯಮಿ; ಗೋಮತಿ ಗ್ರೂಪ್ ಎಂದು ಪ್ರಸಿದ್ಧವಾದ ಸಮುಚ್ಚಯದ ಮಾಲಿಕ. ಈತನ ಮಗ ಸಿದ್ಧಾರ್ಥ ಚಿತ್ರಕಾರ; ಆತ ತಂದೆಯ ಪ್ರಭಾವ-ಪ್ರಭಾವಳಿಯ ಪಾಶದಿಂದ ಬಿಡುಗಡೆಯಾಗಬೇಕೆಂದು ಹವಣಿಸುತ್ತಿದ್ದಾನೆ. ಅದಕ್ಕಾಗಿ ಆತ ಈ ನಾಟಕದ ಆರಂಭದಲ್ಲಿಯೇ ಮನೆ ಬಿಟ್ಟು ಬಂದಿದ್ದಾನೆ; 'ದಿವ್ಯ'ದ ಹುಡುಕಾಟದಲ್ಲಿ ತೊಡಗಿದ್ದಾನೆ. ಇಲ್ಲಿ ಆತನಿಗೆ ಸಿಗುವ ಒಂದು ಸಂದೇಶ ಮತ್ತೆ ಆತನನ್ನು ಮನೆಯ ಕಡೆ ಮುಖಮಾಡಿಸುತ್ತದೆ; ಅಲ್ಲಿ ಆತನನ್ನು ತನ್ನ ತಂದೆಯನ್ನು ಅರಿಯಲು ತೊಡಗುವ ಮನೋಯಾತ್ರೆಯೊಂದರಲ್ಲಿ ನಡೆಸುತ್ತದೆ. ಇಂಥ ಯಾತ್ರೆಯೊಂದರ ತುಣುಕು ನೋಟಗಳೇ ಈ ನಾಟಕದ ದೃಶ್ಯಾವಳಿ...

 

 

ABOUT THE AUTHOR 

Vivek Shanbhag (ವಿವೇಕ ಶಾನಭಾಗ) is an Indian story writer, novelist and playwright in Kannada. He is the author of eight works of fiction and two plays, all of which have been published in Kannada.[1] His works have been translated into English and several other Indian languages. Vivek Shanbhag also worked as editor for the literary magazine "Desha Kaala" for 5 years. "Desha Kaala" was considered as one of the best literary magazines in Kannada.

Shanbhag was a Writer in Residence at the International Writing Program at the University of Iowa during the fall of 2016. Vivek Shanbhag is considered as one of the finest writer in the history of Kannada Literature. "Huli Savaari", "Kantu", "Noolina Eni", "Guruthu", "Langaru", "Ankura", "Mattobbana Samsara", "Sharvana Services", "Ghachar Gochar", "Innu Ondu", "Ondu Badi Kadalu" and "Ooru Bhanga" are his best contribution to the Kannada fiction. His short stories and novels are highly praised by critics. Through his recent novella Ghachar Gochar he got huge popularity as a writer from allover the nation.

 

ಪುಟಗಳು: 91

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)