Click here to Download MyLang App

ಗೋಪಾಲಕೃಷ್ಣ ಅಡಿಗ ಅವರ ಆಯ್ದ ಕವಿತೆಗಳು (ಇಬುಕ್)

ಗೋಪಾಲಕೃಷ್ಣ ಅಡಿಗ ಅವರ ಆಯ್ದ ಕವಿತೆಗಳು (ಇಬುಕ್)

e-book

ಪಬ್ಲಿಶರ್
ಗೋಪಾಲಕೃಷ್ಣ ಅಡಿಗ
ಮಾಮೂಲು ಬೆಲೆ
Rs. 60.00
ಸೇಲ್ ಬೆಲೆ
Rs. 60.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

 ಗೋಪಾಲಕೃಷ್ಣ ಅಡಿಗ

ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೊಗೇರಿ ಎಂಬ ಹಳ್ಳಿಯಲ್ಲಿ ೧೮ ಫೆಬ್ರವರಿ ೧೯೧೮ರಲ್ಲಿ. ತಮ್ಮ ಪ್ರಾರಂಭದ ವಿದ್ಯಾಭ್ಯಾಸವನ್ನು ದಕ್ಷಿಣ ಕನ್ನಡದಲ್ಲಿ ಮುಗಿಸಿ, ಮೈಸೂರು ವಿಶ್ವವಿದ್ಯಾಲಯದಲ್ಲಿ ಬಿ.ಎ. ಆನರ್ಸ್, ಇಂಗ್ಲೀಷ್ ಎಂ.ಎ. ಪದವಿಗಳನ್ನು ಪಡೆದರು. ನಂತರ ಮೈಸೂರಿನ ಶಾರದಾ ಕಾಲೇಜು, ಸೇಂಟ್ ಫ಼ಿಲೊಮಿನಾಸ್ ಕಾಲೇಜು, ಕುಮಟಾ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. ನಂತರ ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಸಾಗರದ ಲಾಲ್‌ಬಹದ್ದೂರ್ ಶಾಸ್ತ್ರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದರು. ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ಼್ ಅಡ್ವಾನ್ಸ್‌ಡ್ ಸ್ಟಡೀಸ್‌ನ ರಿಸರ್ಚ್ ಫ಼ೆಲೋ ಆಗಿ ಕೆಲಸ ಮಾಡಿದರು. ಇವರು ತಮ್ಮ ಹದಿಮೂರನೆಯ ವಯಸ್ಸಿನಲ್ಲಿಯೇ ಭಾಮಿನಿ ಷಟ್ಪದಿ, ವಾರ್ಧಕ ಷಟ್ಪದಿ, ಕಂದಪದ್ಯ ಮತ್ತು ಇತ್ಯಾದಿ ಪದ್ಯರಚನೆಗಳನ್ನು ಶುರುಮಾಡಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಬೀರ್ ಸಮ್ಮಾನ್, ಪಂಪ ಪ್ರಶಸ್ತಿ ಮತ್ತು ಹಲವಾರು ಪಶಸ್ತಿಗಳು ಬಂದಿವೆ. ಹಾಗೂ ಇವರು ೫೧ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಅಡಿಗರು ೧೪ ನವಂಬರ್ ೧೯೯೨ರಂದು ನಿಧನಹೊಂದಿದರು.

 

ಪುಟಗಳು: 146

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

Based on 1 review
100%
(1)
0%
(0)
0%
(0)
0%
(0)
0%
(0)
D
Dr.Annaiah Annaiah

ಬುಕ್ not recived