Click here to Download MyLang App

ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು (ಇಬುಕ್)

ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು (ಇಬುಕ್)

e-book

ಪಬ್ಲಿಶರ್
ಕೆ.ವಿ. ಸುಬ್ಬಣ್ಣ
ಮಾಮೂಲು ಬೆಲೆ
Rs. 100.00
ಸೇಲ್ ಬೆಲೆ
Rs. 100.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

‘ಕವಿರಾಜಮಾರ್ಗ’ವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. ‘ಕವಿರಾಜಮಾರ್ಗ’ ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ. ‘ಕಾವೇರಿಯಿಂದಂ-ಆ - ಗೋದಾವರಿವರಂ - ಇರ್ದ - ನಾಡು - ಅದು ಆ ಕನ್ನಡದೊಳ್‌ಭಾವಿಸಿದ ಜನಪದಂ’. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು ‘ಭಾವಿತ’ವಾದದ್ದು; ‘ಕನ್ನಡ’ ವೆಂಬುದರ ಒಳಗಡೆ -- ಆ ಚಿಪ್ಪಿನ ಒಳಗೆ ಎನ್ನಿ -- ‘ಭಾವಿತ’ ವಾದದ್ದು. ಅಂದರೆ, ‘ಕನ್ನಡ’ ವೆಂಬುದು ಒಂದು ಚಿತ್-ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್ - ಜಗತ್ತಿನೊಳಗೆ ಮೈದಾಳಿದ್ದಾಗಿ ಅನಂತರ ನಿರ್ಮಿತಗೊಂಡಿದೆ. ಮತ್ತು ಇದು, ‘ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ’. ವಸುಧಾ (ಭೂಮಿ) ಎನ್ನುವುದು ಅನಂತ ಬ್ರಹ್ಮಾಂಡದೊಳಗಿನ ಒಂದು ‘ವಲಯ’ ಅಷ್ಟೇ; ಮತ್ತು ‘ಕನ್ನಡ’ ವೆಂಬ ‘ವಿಷಯ’ (ನಾಡು) ವು ಆ ವಸುಧಾವಲಯದಲ್ಲಿ ‘ವಿಲೀನ’ ವಾಗಿದೆ, ಸಮರಸವಾಗಿ ಬೆರೆತುಕೊಂಡಿದೆ. ಹಾಗೆಂದಮಾತ್ರಕ್ಕೆ ಇದು ಸ್ವಂತಿಕೆಯ ಚಹರೆಯಿಲ್ಲದೆ ವಸುಧೆಯಲ್ಲಿ ಗುರುತು ಸಿಗದಂತೆ ಮುಳುಗಿಹೋದದ್ದಲ್ಲ; ತನ್ನದೇ ‘ವಿಶೇಷ’ (ವೈಶಿಷ್ಟ್ಯ) ಇರುವ ನಾಡು. ಅಷ್ಟೇ ಅಲ್ಲ -- ಇದು ‘ವಿಶದ’ ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, ‘ವಸುಧಾವಲಯ ವಿಲೀನ, ವಸುಧೆಯ ಒಳಗಿನ ಒಂದು ಕಿರುಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ ‘ಕನ್ನಡ’ ದ ಇಂಥ ಪ್ರತಿಮೆಯನ್ನು ‘ಕವಿರಾಜಮಾರ್ಗ’ವು ಕಂಡರಿಸಿಟ್ಟಿದೆ.

 

ಪುಟಗಳು: 128

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !