ಪ್ರಕಾಶಕರು: ಛಂದ ಪುಸ್ತಕ
Publisher: Chanda pusthaka
ಪದ್ಮನಾಭ ಭಟ್ ಶೇವ್ಕಾರ ಅವರ ಎರಡನೆಯ ಕಥಾಸಂಕಲನ. ಉತ್ತರ ಕನ್ನಡ ಜಿಲ್ಲೆ ಮತ್ತು ಬೆಂಗಳೂರಿನ ನಡುವೆ ಚೆಲ್ಲಿ ಹೋದ ಹಲವು ಜೀವಗಳ ಅಪರೂಪದ ಕಥನಗಳು ಇಲ್ಲಿ ನಮಗೆ ದಕ್ಕುತ್ತವೆ. ಅವರ ಹಿಂದಿನ ಕಥಾಸಂಕಲನ 'ಕೇಪಿನಡಬ್ಬಿ' - ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡು ಓದುಗರ ಮತ್ತು ವಿಮರ್ಶಕರ ಮೆಚ್ಚುಗೆಯನ್ನು ಗಳಿಸಿತ್ತು.
ಉತ್ತರ ಕನ್ನಡದ ಅಂಕೋಲೆಯ ಗಂಗಾವಳಿ ನದಿ ಸೆರಗಿನಲ್ಲಿನ ಶೇವ್ಕಾರ ಎಂಬ ಪುಟ್ಟ ಊರು. ಹುಟ್ಟಿದ್ದು 1990ರಲ್ಲಿ. ಪಿಯುಸಿವರೆಗೆ ಊರಲ್ಲಿಯೇ ಓದು. ನಂತರ ಹುಬ್ಬಳ್ಳಿಯಲ್ಲಿ ಬಿ.ಎ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಎಂ.ಎ; 2013 ನವೆಂಬರ್‍ನಿಂದ ‘ಪ್ರಜಾವಾಣಿ’ ದಿನಪತ್ರಿಕೆಯಲ್ಲಿ ವೃತ್ತಿಬದುಕು ಆರಂಭ. ಓದು-ಬರಹ ಬರೀ ಹವ್ಯಾಸವಷ್ಟೇ ಅಲ್ಲವೇ ಅಲ್ಲ. ಅದನ್ನು ಹೊರತುಪಡಿಸಿ ಸಿನಿಮಾ, ರಂಗಭೂಮಿ, ಪರ್ಯಟನೆಗಳಲ್ಲಿಯೂ ಆಸಕ್ತ.
ಇವರ ಮೊದಲ ಕಥಾಸಂಕಲನ ‘ಕೇಪಿನ ಡಬ್ಬಿ’ಗೆ ಕೇಂದ್ರ ಸಾಹಿತ್ಯ ಅಕಾದೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಬಹುಮಾನ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ ಹಾಗೂ ಟೋಟೋ ಪುರಸ್ಕಾರಗಳು ಲಭಿಸಿವೆ. ಇದು ಅವರ ಎರಡನೆಯ ಕಥಾಸಂಕಲನ.
ಪುಟಗಳು: 140
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !