Click here to Download MyLang App

ಸು.ರಂ. ಎಕ್ಕುಂಡಿ ಅವರ ಆಯ್ದ ಕವಿತೆಗಳು,  ಸು.ರಂ. ಎಕ್ಕುಂಡಿ ,  Su.Ram. Ekkundi Avara Aayda Kavithegalu,  Su.Ram. Ekkundi,

ಸು.ರಂ. ಎಕ್ಕುಂಡಿ ಅವರ ಆಯ್ದ ಕವಿತೆಗಳು (ಇಬುಕ್)

e-book

ಪಬ್ಲಿಶರ್
ಸು.ರಂ. ಎಕ್ಕುಂಡಿ
ಮಾಮೂಲು ಬೆಲೆ
Rs. 60.00
ಸೇಲ್ ಬೆಲೆ
Rs. 60.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ABOUT THE AUTHOR

ಸುಬ್ಬಣ್ಣ ರಂಗನಾಥ ಎಕ್ಕುಂಡಿಯವರು ೨೦, ಜನವರಿ ೧೯೨೩ರಂದು ರಾಣಿಬೆನ್ನೂರಿನಲ್ಲಿ ಜನಿಸಿದರು; ತಂದೆ - ರಂಗಾಚಾರಿ ಎಕ್ಕುಂಡಿ, ತಾಯಿ - ರಾಜಕ್ಕ. ಹದಿನೈದನೆಯ ವಯಸ್ಸಿನಲ್ಲಿ ಇವರು ತಮ್ಮ ಶಾಲಾ ದಿನಗಳಲ್ಲಿಯೇ ಬರಹ ಆರಂಭಿಸಿದರು. ಸಾಂಗ್ಲಿಯ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಅಭ್ಯಾಸ ಮಾಡಿದರು. ಉತ್ತರಕನ್ನಡದ ಬಂಕಿಕೊಡ್ಲದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ವೃತ್ತಿ ಮಾಡಿದರು; ಅಲ್ಲಿಯ ಸ್ಥಳೀಯ ಜಾನಪದ ಕಥನಸಂಪ್ರದಾಯಗಳಿಂದ ವಿಶೇಷವಾಗಿ ಆಕರ್ಷಿತರಾದರು. ‘ಕಥನ ಕವನಗಳು’, ‘ಬಕುಲದ ಹೂವುಗಳು’, ‘ಹಾವಾಡಿಗರ ಹುಡುಗ’ ಮುಂತಾದವು ಇವರ ಪ್ರಮುಖ ಕೃತಿಗಳು. ಮಾಧ್ವದರ್ಶನ ಮತ್ತು ಕಾರ್ಲ್‌ಮಾರ್ಕ್ಸ್ ಚಿಂತನೆಗಳಿಂದ ಏಕಕಾಲಕ್ಕೆ ಪ್ರಭಾವಿತರಾಗಿರುವ ವಿಶಿಷ್ಟ ಕವಿ - ಎಂದು ಇವರನ್ನು ಗುರುತಿಸಲಾಗಿದೆ. ಕಥನಕಾವ್ಯ ಪ್ರಕಾರಕ್ಕೆ ಇವರ ಕೊಡುಗೆ ಗಣನೀಯ. ಇವರಿಗೆ ಸೋವಿಯೆತ್ ಲ್ಯಾಂಡ್ ನೆಹರೂ ಪ್ರಶಸ್ತಿ, ಕರ್ನಾಟಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ದೊರಕಿವೆ. ಎಕ್ಕುಂಡಿಯವರು ೨೦, ಆಗಸ್ಟ್ ೧೯೯೫ರಂದು ನಿಧನಹೊಂದಿದರು.

 

ಪುಟಗಳು: 141

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)