ಪ್ರಕಾಶಕರು: ಅಕ್ಷರ ಪ್ರಕಾಶನ
Publisher: Akshara Prakashana
ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು -- ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ -- ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
ಯಶವಂತ ಚಿತ್ತಾಲ
ಯಶವಂತ ಚಿತ್ತಾಲರು ೧೯೨೮, ಆಗಸ್ಟ್ ೩ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹನೇಹಳ್ಳಿಯಲ್ಲಿ ವಿಠೋಬಾ ಮತ್ತು ರುಕ್ಮಿಣಿ ದಂಪತಿಗಳ ಪುತ್ರನಾಗಿ ಜನಿಸಿದರು. ಹನೇಹಳ್ಳಿ, ಧಾರವಾಡ, ಮುಂಬಯಿಗಳಲ್ಲಿ ಶಿಕ್ಷಣವನ್ನು ಪೂರೈಸಿ ಅಮೇರಿಕಾದ ನ್ಯೂ ಜೆರ್ಸಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ವ್ಯಾಸಂಗವನ್ನು ಮಾಡಿದರು. ರಾಸಾಯನಿಕ ತಂತ್ರಜ್ಞಾನದ ಪಾಲಿಮರ್ ಟೆಕ್ನಾಲಜಿಯಲ್ಲಿ ವಿಶೇಷ ಪರಿಣತಿ ಪಡೆದರು. ಮುಂಬಯಿಯ ಬೇಕ್‌ಲೈಟ್ ಹೈಲಂ ಲಿ. ಕಂಪೆನಿಯಲ್ಲಿ ಜಿ.ಎಂ. ಮತ್ತು ಎಕ್ಸಿಕ್ಯೂಟೀವ್ ಡೈರೆಕ್ಟರ್ ಆಗಿದ್ದು ೧೯೮೫ರಲ್ಲಿ ನಿವೃತ್ತವಾದರು. ಇವರ ‘ಕತೆಯಾದಳು ಹುಡುಗಿ’; ಕೃತಿಗೆ ೧೯೮೩ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತು. ಇವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಭಾರತೀಯ ಭಾಶಾ ಪ್ರಶಸ್ತಿ, ಮಹಾರಾಷ್ಟ್ರ ಸರ್ಕಾರದಿಂದ ಮಹಾರಾಷ್ಟ್ರ ಗೌರವ ಪುರಸ್ಕಾರ, ಮಾಸ್ತಿ ಪ್ರಶಸ್ತಿ, ಡಾ.ಶಿವರಾಮ ಕಾರಂತ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಚಿತ್ತಾಲರು ೨೨ ಮಾರ್ಚ್ ೨೦೧೪ ರಂದು ನಿಧನ ಹೊಂದಿದರು.
ಪುಟಗಳು: 148
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !