ಬರಹಗಾರ: ಕುವೆಂಪು
ನಿರ್ಮಾಣ ಸಹಾಯ: ಧ್ವನಿಧಾರೆ ಮಿಡಿಯಾ
ಆಡಿಯೋ ಪುಸ್ತಕದ ಅವಧಿ : 9 ಗಂಟೆ 24 ನಿಮಿಷ
1. ರಾಮತೀರ್ಥದೆಡೆ ಕಲ್ಲುಸಾರದ ಮೇಲೆ - ರಸ್ತೆಯಲ್ಲಿ ಶನಿ
2. ಚಿನ್ನಯ್ಯನ ಮೀನು ಷಿಕಾರಿ - ಸೀತೆ
3. ಕಾನೂರು ಚಂದ್ರಯ್ಯಗೌಡರ ಮೂರನೆಯ ಹೆಂಡತಿ - ಸೇರೆಗಾರರ ಕೇಪಿನ ಕೋವಿ - ಕಡೆಗೋಲು ಕಂಬದ ಸಾಕ್ಷಿಯಲ್ಲಿ
4. ಬೇಲರ ಬೈರನ ಮಗ ಗಂಗಹುಡುಗನೊಡನೆ
5. ಚಂದ್ರಯ್ಯಗೌಡರ ದರ್ಬಾರು - ಬಿಂಕದ ಸಿಂಗಾರಿ
6. ಅಣ್ಣಯ್ಯಗೌಡರ ಸಂಸಾರ ಶೂಲ - ಕಳ್ಳಂಗಡಿ
7. ಕಾನುಬೈಲಿನ ಕಳ್ಳುಗೊತ್ತು - ಹಳತು ಹೊಸತು ಸೇರಿದರೆ
8. ಹಲ್ಲಿಯ ಕೃಪೆ - ನೂರು ರೂಪಾಯಿ ನೋಟು
9. ಕತ್ತಲೆಗಿರಿಯ ಸರುವಿನಲ್ಲಿ ಕಾಡುಹಂದಿಯ ಬೇಟೆ - ಕಿಲಿಸ್ತರ ಜಾಕಿ ಮತ್ತು ಟೈಗರ್ ನಾಯಿ
10. ಮಾಯಗಾರ್ತಿ ಗಂಗೆ - ಸೀತೆ - ಹೂವಯ್ಯ
11. ಆ ಹೊಸಬಿ ಅಪ್ಪಯ್ಯನ ಹೆಂಡತಿಯೆ! - ಹೂವಯ್ಯನ ಭಾವಸಮಾಧಿ
12. ಕಾಡುಕಿಚ್ಚಿಗೆ ಕಿಡಿಯ ಮುನ್ನುಡಿ - ಶೂದ್ರಸಂಘದ ಮಹಾಸಭೆಯಲ್ಲಿ!
ನಾನು ಓದಿದ ಮೊದಲ ಕನ್ನಡ ಕಾದಂಬರಿ ಕುವೆಂಪು ಅವರ ಕಾನೂರು ಹೆಗ್ಗಡಿತಿ. ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿದ್ದಾಗ ಬೇಸಿಗೆ ರಜೆಯಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿ ಕಣ್ಣಿಗೆ ಬಿದ್ದ ಈ ಪುಸ್ತಕವನ್ನು ಓದಲು ಆರಂಭಿಸಿ, ಎರವಲು ಪಡೆದು ಮನೆಗೂ ತಂದು ಓದಿ ಮುಗಿಸಿದ್ದು ನೆನಪಿದೆ. ಸುಮಾರು ಆರು ನೂರು ಪುಟಗಳ ಕಾದಂಬರಿ ಓದಿ ಮುಗಿಸಲು ಬಹುಶಃ ಆ ರಜೆಯ ಬಹುಭಾಗವೇ ಹಿಡಿದಿರಬೇಕು. ಈಗ ಹತ್ತು ವರ್ಷಗಳ ಹಿಂದೆ ಮತ್ತೊಮ್ಮೆ ಓದುವಾಗಲೂ ಕಾದಂಬರಿಯ ಸ್ವಾರಸ್ಯಕಡಿಮೆಯಾದಂತೆ ಅನಿಸಲಿಲ್ಲ.
೧೯೩೬ರಲ್ಲಿ ಪ್ರಕಟವಾದ ಈ ಕಾದಂಬರಿಯು ಒಳಗೊಳ್ಳುವ ಪರಿಸರ ಶಿವಮೊಗ್ಗ-ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಎಂಬ ಹೆಸರಿನಿಂದ ಗುರುತಿಸಲ್ಪಡುವ ಪ್ರದೇಶ. ನನ್ನ ಊರು ಅದೇ ಪ್ರದೇಶದಲ್ಲಿರುವುದರಿಂದ ಈ ಕಾದಂಬರಿಯಲ್ಲಿ ವರ್ಣನೆಗೊಳ್ಳುವ ಹಲವಾರು ಸ್ಥಳ ಹಾಗೂ ವ್ಯಕ್ತಿಚಿತ್ರಗಳು ನಮಗೆಲ್ಲ ಹೊಸತಾಗಿರಲಿಲ್ಲ. ಆದರೂ ಆ ಕಾರಣಕ್ಕಾಗಿ ಕಾದಂಬರಿಯ ಸ್ವಾರಸ್ಯ ನನಗೇನೂ ಕಡಿಮೆಯಾಗಿರಲಿಲ್ಲ. ಮಲೆನಾಡಿನವರಲ್ಲದ ಓದುಗರಿಗಂತೂ ಇದೊಂದು ಹೊಸ ಪ್ರಪಂಚ. ಕುವೆಂಪು ಅವರಂತಹ ಕಲ್ಪನೆ, ಒಳನೋಟ, ಜೀವನ ಪ್ರೀತಿ ಎಲ್ಲವೂ ಬೆರೆತ ಕೃತಿಕಾರನ ಲೇಖನಿಯಲ್ಲಿ ಮಲೆನಾಡಿನ ಪ್ರಕೃತಿ ಲೋಕ ಕಣ್ಣೆದುರಿಗೇ ನಿಂತಷ್ಟು ನೈಜತೆಯಲ್ಲಿ ಮೂಡಿ ಬರುತ್ತದೆ.
ಕಾದಂಬರಿಯ 'ಅರಿಕೆ' ಯಲ್ಲಿ ಕುವೆಂಪು ಅವರೇ ಹೇಳಿರುವಂತೆ 'ಕಾದಂಬರಿ ಅಂಗೈ ಮೇಲಣ ನಾಟಕಶಾಲೆ'. ವಿಧ ವಿಧದ ದೃಶ್ಯಗಳ, ವ್ಯಕ್ತಿಗಳ, ಸನ್ನಿವೇಶಗಳ ಪೂರ್ಣ ಸ್ವಾರಸ್ಯ ಸಿಗಲು ಅವುಗಳು ಓದುವವರ ಪ್ರತಿಭೆಯಲ್ಲಿ ಮತ್ತೊಮ್ಮೆ ಸೃಷ್ಟಿಯಾಗಬೇಕಾಗುತ್ತದೆ.
ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ, ಕಳೆದ ಶತಮಾನದ ಆರಂಭದ ಕಾಲಘಟ್ಟದಲ್ಲಿ ಮಲೆನಾಡು ಪ್ರದೇಶದ ಸೂಕ್ಷ್ಮ ಸಾಮಾಜಿಕ, ರಾಜಕೀಯ ಬದಲಾವಣೆಗಳನ್ನು ಅಲ್ಲಿನ ಕೆಲವು ಕುಟುಂಬಗಳ ಜನರ ಬದುಕಿನ ಹಿನ್ನೆಲೆಯಲ್ಲಿ ಈ ಕಾದಂಬರಿಯ ಓದುಗರು ಗ್ರಹಿಸಬಹುದು. ಜಮೀನುದಾರಿಕೆಯ ದರ್ಪ, ಅಧಿಕಾರದ ಪ್ರತಿನಿಧಿಯಂತಿರುವ ಕಾನೂರು ಚಂದ್ರಯ್ಯಗೌಡರ ಕುಟುಂಬವು ಕತೆಯ ಕೇಂದ್ರಬಿಂದು. ಈ ಕುಟುಂಬದ ಒಳಗಿನ ಹಾಗೂ ಹೊರಗಿನ ಸಂಬಂಧಗಳು ಅಂದಿನ ಕಾಲದ ಕೌಟುಂಬಿಕ ಹಾಗೂ ಸಾಮೂಹಿಕ ಜೀವನದ ಪ್ರತಿಮೆಗಳಾಗಿ ಕಾಣಬರುತ್ತವೆ.
- ಶ್ರೀನಾಥ್ ಶಿರಗಳಲೆ ಬ್ಲಾಗ್ ವಿಮರ್ಶೆ
https://srikannadi.blogspot.com/2016/09/blog-post.html
ಈಗ ಕೇಳಿ ಕೇವಲ ಮೈಲ್ಯಾಂಗ್ ಆ್ಯಪ್ ಅಲ್ಲಿ.
ಕಾನೂರು ಹೆಗ್ಗಡಿತಿ - ಪೂರ್ತಿ ಸರಣಿ ಆಡಿಯೋ ಬುಕ್ ಕೇವಲ 599/-ಕ್ಕೆ !