Click here to Download MyLang App

Hampana,  Mooraneya Mangarasa,  ಮೂರನೆಯ ಮಂಗರಸ ಕವಿ,  ಡಾ. ಹಂಪ ನಾಗರಾಜಯ್ಯ,  muraneya mangarasa,  Hampa Nagarajaiah,

ಮೂರನೆಯ ಮಂಗರಸ ಕವಿ (ಇಬುಕ್)

e-book

ಪಬ್ಲಿಶರ್
ಡಾ. ಹಂಪ ನಾಗರಾಜಯ್ಯ
ಮಾಮೂಲು ಬೆಲೆ
Rs. 99.00
ಸೇಲ್ ಬೆಲೆ
Rs. 99.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ನಮ್ಮ ವಿಶ್ವವಿದ್ಯಾನಿಲಯದ ಮೊದಲನೆಯ ಛಾನ್ಸಲರೂ ಆಳಿದ ಮಹಾಸ್ವಾಮಿಯವರೂ ಆದ ಶ್ರೀ ನಾಲ್ಮಡಿ ಕೃಷ್ಣರಾಜ ಒಡೆಯರ್ ಬಹದ್ದೂರ್ ಅವರು ಮೊದಲನೆಯ ‘ ಸೆನೆಟ್ ‘ ಸಭೆಯ ಪ್ರಾರಂಭೋತ್ಸವ ಸಮಯದಲ್ಲಿಯೂ ಮೊದಲನೆಯ ' ಕಾನ್ವೊಕೇಷನ್’ ಸಮಾರಂಭದ ಕಾಲದಲ್ಲಿಯೂ ವಿಶ್ವವಿದ್ಯಾ ನಿಲಯದ ವಿದ್ಯೆ ಪಟ್ಟಣಗಳಲ್ಲಿ ಮಾತ್ರ ಕೇಂದ್ರೀಕೃತವಾಗದೆ ನಾಡಿನ ಮೂಲೆ ಮೂಲೆಗೂ ಪ್ರಸರಿಸಿ, ಉಚ್ಚ ಶಿಕ್ಷಣವನ್ನು ಪಡೆಯಲು ಅವಕಾಶಹೊಂದದ ಸಾಮಾನ್ಯಜನರ ಹೃದಯ ವನ್ನು ಬೆಳಗಿ ಸಮಷ್ಟಿಪ್ರಜ್ಞೆಯ ವಿಕಾಸಕ್ಕೆ ಕಾರಣವಾಗಬೇಕು ಎಂಬ ಮಹದಾಶಯವನ್ನು ವ್ಯಕ್ತಪಡಿಸಿದ್ದರು. ಅವರ ಆಶಯ ಇಂದು ಫಲದಾಯಕವಾಗುತ್ತಿದೆ. ನಮ್ಮ ವಿಶ್ವವಿದ್ಯಾನಿಲಯದ ಪ್ರಸಾರಾಂಗ ನಾಡಿನ ಮೂಲೆಮೂಲೆಯಲ್ಲಿ ಪ್ರಚಾರೋಪನ್ಯಾಸ ಗಳನ್ನು ಏರ್ಪಡಿಸಿ, ಸಂಸ್ಕೃತಿ ಪ್ರಸಾರಕಾರ್ಯವನ್ನು ಬಹಳ ಸಮರ್ಪಕವಾದ ರೀತಿಯಲ್ಲಿ ನೆರವೇರಿಸುತ್ತಿದೆ.

ಜನರು ಬಯಸಿದೆಡೆಗಳಲ್ಲಿ ಈ ಪ್ರಚಾರೋಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ. ವಿಶ್ವವಿದ್ಯಾನಿಲಯದಲ್ಲಿ ಅನೇಕ ವರ್ಷ ಗಳು ಪಾಠ ಹೇಳಿ ಮಿಗಿಲಾದ ಜ್ಞಾನವನ್ನು ಗಳಿಸಿರುವ ಘನ ವಿದ್ವಾಂಸರು ಜನರು ಅಪೇಕ್ಷಿಸುವ ವಿಷಯಗಳನ್ನು ಕುರಿತು ಸರಳವೂ ಸುಲಭಗ್ರಾಹ್ಯವೂ ಆದ ಕನ್ನಡಭಾಷೆಯ ಮೂಲಕ ತಿಳಿವಳಿಕೆ ಕೊಡುತ್ತಾರೆ. ಜ್ಞಾನವನ್ನು ಹಂಚುವುದರಲ್ಲೂ ಆನಂದವಿದೆ. ಅಧ್ಯಾಪಕವೃಂದದವರು ಹಳ್ಳಿಗಳಲ್ಲಿಯೇ ಒಂದೆರಡು ದಿನಗಳು ನೆಲಸಿ, ಸಾಮಾನ್ಯ ಜನರಂತೆಯೇ ಇದ್ದುಕೊಂಡು, ಗಳಿಸಿರುವ ಜ್ಞಾನವನ್ನು ಜನಸಾಮಾನ್ಯರ ಹೃದಯದಲ್ಲಿ ಬಿತ್ತಿ, ತಾವೂ ಆನಂದವನ್ನು ಅನುಭವಿಸುತ್ತಾರೆ ಮತ್ತು ಇತರರಿಗೂ ಆನಂದವನ್ನುಂಟುಮಾಡುತ್ತಾರೆ. ಈ ಉಪನ್ಯಾಸಗಳು ವಿಶ್ವವಿದ್ಯಾನಿಲಯದ ಮೆಟ್ಟಲನ್ನು ಹತ್ತಲು ಅವಕಾಶವಿಲ್ಲದವರಿಗೆ ವಿಶ್ವವಿದ್ಯಾನಿಲಯದ ವಿದ್ಯೆಯ ಸೌಲಭ್ಯ ವನ್ನು ನೀಡಲು ನೆರವಾಗುತ್ತವೆ ; ವಿಶ್ವವಿದ್ಯಾನಿಲಯದಲ್ಲಿ ಜ್ಞಾನವನ್ನು ಗಳಿಸಿ ನಾಡಿನ ಬೇರೆಬೇರೆ ಭಾಗಗಳಲ್ಲಿ ವಿವಿಧ ಕಾರ್ಯರಂಗಗಳಲ್ಲಿ ನಿರತರಾಗಿರುವ ಜನರಿಗೆ ಮಾರ್ಗದರ್ಶಕ ವಾಗುತ್ತವೆ ; ನಮ್ಮ ಸಮಾಜದಲ್ಲಿನ ಭೇದಭಾವಗಳನ್ನು ಹೋಗಲಾಡಿಸಿ ಸಮಾನತೆಯನ್ನು ಸ್ಥಾಪಿಸಲು ಸಹಾಯಕ ವಾಗುತ್ತವೆ; ವಿಶ್ವವಿದ್ಯಾನಿಲಯಕ್ಕೂ ಸಾಮಾನ್ಯ ಜನತೆಗೂ ಮಧ್ಯೆ ಇರುವ ದೊಡ್ಡ ಅಂತರವನ್ನು ಪರಿಹರಿಸಲು ನೆರವಾಗು ತ್ತವೆ ; ಜನರಲ್ಲಿ ಜ್ಞಾನೋದಯವನ್ನುಂಟುಮಾಡಿ, ದುಃಖಕ್ಕೆ ಮೂಲಕಾರಣವಾದ ಅಸಮಾನತೆಯನ್ನು ಹೋಗಲಾಡಿಸಿ, ವಿಶಾಲಭಾವನೆ ಮೂಡುವಂತೆ ಮಾಡುತ್ತವೆ.

ಪ್ರಚಾರೋಪನ್ಯಾಸಗಳನ್ನು ಕಿರುಹೊತ್ತಗೆಗಳ ರೂಪದಲ್ಲಿ ಪ್ರಕಟಿಸಲಾಗುತ್ತಿದೆ. ಈ ಉಪನ್ಯಾಸಗಳನ್ನು ಕೇಳಲು ಅವಕಾಶ ಸಿಕ್ಕದವರು ಈ ಹೊತ್ತಗೆಗಳನ್ನು ಕೊಂಡು, ಓದಿ ತಿಳಿವಳಿಕೆ ಪಡೆಯಲು ಅವಕಾಶವಿದೆ. ಈ ಮಾಲೆಯ ಪುಸ್ತಕಗಳು ಹೆಚ್ಚು ಜನಪ್ರಿಯವಾಗಿವೆ. ಪುಸ್ತಕಗಳು ಅಚ್ಚಿನಮನೆಯಿಂದ ಹೊರ ಬಿದ್ದಕೂಡಲೆ ಜನರು ಆದರದಿಂದ ಕೊಂಡು ಓದುತ್ತಾರೆ. ಈ ಮಾಲೆಯಲ್ಲಿ ಈಗಾಗಲೆ ಭೌತವಿಜ್ಞಾನ, ರಸಾಯನವಿಜ್ಞಾನ, ಪ್ರಾಣಿವಿಜ್ಞಾನ, ವೈದ್ಯವಿಜ್ಞಾನ, ಗಣಿತವಿಜ್ಞಾನ, ಸಮಾಜ ವಿಜ್ಞಾನ, ಅರ್ಥಶಾಸ್ತ್ರ, ತತ್ವಶಾಸ್ತ್ರ, ಸಾಹಿತ್ಯ ಮತ್ತು ಕಲೆ, ಮುಂತಾದ ವಿಷಯಗಳನ್ನು ಕುರಿತ ನೂರ ಐವತ್ತಮೂರು ಪುಸ್ತಕಗಳು ಪ್ರಕಟವಾಗಿವೆ ಎಂಬುದನ್ನು ತಿಳಿಸಲು ನನಗೆ ಬಹಳ ಸಂತೋಷವಾಗುತ್ತದೆ.

ಈ ಮಾಲೆಯಲ್ಲಿ ಈಗ ಹೊರಬೀಳುತ್ತಿರುವ ಹಂಪ. ನಾಗರಾಜಯ್ಯ ಅವರ ‘ ಮೂರನೆಯ ಮಂಗರಸ ಕವಿ ‘ ಹೆಚ್ಚು ಜನಪ್ರಿಯನಾಗಲೆಂದು ನಾನು ಆಶಿಸುತ್ತೇನೆ.

 

ಪುಟಗಳು : 200

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)