
ಪ್ರಕಾಶಕರು: ಛಂದ ಪುಸ್ತಕ
Publisher: Chanda pusthaka
ಬರಹಗಾರರು: ವಸುಧೇಂದ್ರ
ತೆಲುಗುನಲ್ಲಿ ಶ್ರೀರಮಣ ಬರೆದ ಈ ಕಥಾಸಂಕಲನ ಬಹಳ ಪ್ರಸಿದ್ಧಿಯನ್ನು ಪಡೆದಿದೆ. ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಪ್ರತಿಗಳು ಆಂಧ್ರದಲ್ಲಿ ಮಾರಾಟವಾಗಿವೆ. ’ಮಿಥುನ’ ಕತೆಯನ್ನು ಆಧರಿಸಿ ಹಲವಾರು ಭಾಷೆಗಳಲ್ಲಿ ಸಿನಿಮಾ ಮಾಡಲಾಗಿದೆ. ಕನ್ನಡದ ಓದುಗರು ಇದನ್ನು ಅತ್ಯಂತ ಪ್ರೀತಿಯಿಂದ ತಮ್ಮ ನಾಡಿನ ಕತೆಗಳೆನ್ನುವಂತೆ ಸ್ವೀಕರಿಸಿದ್ದಾರೆ. ಸುಮಾರು ನಾಲ್ಕು ತಂಡಗಳು ಈ ಕತೆಗಳನ್ನು ಆಧರಿಸಿ ನಾಟಕವನ್ನು ರಂಗಭೂಮಿಗೆ ತಂದಿವೆ. ಕೊಡವ ಭಾಷೆಯಲ್ಲಿಯೂ ’ಮಿಥುನ’ ಕತೆಯನ್ನು ಆಧರಿಸಿ ನಾಟಕ ಮಾಡಿಸಿದ್ದು ಈ ಕತೆಯ ಹೆಗ್ಗಳಿಕೆ ಮತ್ತು ಜನಪ್ರೀತಿಗೆ ಧ್ಯೋತಕವಾಗಿದೆ.