ಪ್ರಕಾಶಕರು: ನವಕರ್ನಾಟಕ ಪಬ್ಲಿಕೇಷನ್ಸ್
Publisher: Navakarnataka Publications
ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ[1],[2] . ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು.
ಕನ್ನಡ ಕಲಿಕೆ ಪುಸ್ತಕಗಳು, ವ್ಯಾಕರಣ, ಭಾಷೆ, ಲಲಿತ ಪ್ರಬಂಧಗಳು, ವಿಮರ್ಶಾ ಲೇಖನಗಳು ಮತ್ತು ವನ್ಯಜೀವಿ ಸಂರಕ್ಷಣೆಗಳ ಕುರಿತಂತೆ ನಲವತ್ತಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಟಿ.ಎಸ್.ಗೋಪಾಲ್ ಅವರು ಇದರ ಲೇಖಕರು.
ಪುಟಗಳು: 80
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !