Click here to Download MyLang App

  ಜೋಗಿ,  ಉಳಿದ ವಿವರಗಳು ಲಭ್ಯವಿಲ್ಲ,  Ulida vivaragalu labhyavilla,    katha sankalana,  Jogi,

ಉಳಿದ ವಿವರಗಳು ಲಭ್ಯವಿಲ್ಲ (ಇಬುಕ್)

e-book

ಪಬ್ಲಿಶರ್
ಜೋಗಿ
ಮಾಮೂಲು ಬೆಲೆ
Rs. 99.00
ಸೇಲ್ ಬೆಲೆ
Rs. 99.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

ಬರಹಗಾರರು: ಜೋಗಿ

ಪುಸ್ತಕ ಪ್ರಕಾರ: ಕಥಾ ಸಂಕಲನ

ಈ ನಗರದ ಜೀವನವೇ ಒಂದು ಅರ್ಥದಲ್ಲಿ ಬ್ಲೂವೇಲ್ ಆಟದಂತೆ ರೂಪಿತವಾದಂತಿದೆ. ಇಲ್ಲಿ ಯಾರೋ ಟಾಸ್ಕ್‌ ಕೊಡುತ್ತಾರೆ. ಅವರು ಕೊಡುವ ಟಾಸ್ಕುಗಳನ್ನು ಪೂರ್ತಿಮಾಡಲು ನಾವು ಹೆಣಗಾಡುತ್ತೇವೆ. ಇಪ್ಪತ್ತು ನಿಮಿಷದಲ್ಲಿ ಎಂಟು ಕಿಲೋಮೀಟರ್ ದೂರದಲ್ಲಿರುವ ಮನೆಗೆ ಪಿಜ್ಜಾ ಕೊಟ್ಟು ಬರುವ ಟಾಸ್ಕು, ಎರಡೇ ವಾರದಲ್ಲಿ ಚಾನಲ್ಲಿನ ಟಿಆರ್‌ಪಿಯನ್ನು ಎರಡರಷ್ಟು ಮಾಡುವ ಟಾಸ್ಕು, ರಾತ್ರಿ ಸಂದಿಗೊಂದಿಗಳಲ್ಲಿ ಅಡಗಿ ನಿಂತು ಕುಡುಕರನ್ನು ಹಿಡಿದು ಸರ್ಕಾರದ ಆದಾಯ ಹೆಚ್ಚಿಸುವ ಟಾಸ್ಕು, ಮಕ್ಕಳನ್ನು ನಂಬರ್ ವನ್ ಮಾಡುವ ಟಾಸ್ಕು, ಹಗಲೀಡೀ ದುಡಿದು, ರಾತ್ರಿ ಕುಡಿದು, ಮನೆಗೆ ಬಂದು ಆಮೇಲೊಂದು ಸಿನಿಮಾ ನೋಡಿ, ನಿದ್ದೆಗಣ್ಣಲ್ಲಿ ಪ್ರವಾಸ ಮಾಡಿ- ತುಂಬು ಜೀವನ ಜೀವಿಸುತ್ತಿದ್ದೇನೆ ಎಂದು ಸಾಬೀತು ಮಾಡುವ ಟಾಸ್ಕು, ಕೊನೆಗೆ ನಮ್ಮನ್ನು ನಾವೇ ನಮಗೇ ಗೊತ್ತಿಲ್ಲದ ಹಾಗೆ ಕೊಂದುಕೊಳ್ಳುವ ಕೊನೆಯ ಟಾಸ್ಕು.

ಇಂಥದ್ದರ ನಡುವೆಯೇ ಒಂದು ಪವಾಡದಂತೆ ಇನ್ನೊಂದೇನೋ ನಡೆಯುತ್ತದೆ. ಯಾರೋ ಬರೆದ ಕತೆಯನ್ನು ಮತ್ಯಾರೋ ಓದಿ ಕಣ್ಣೊದ್ದೆ ಮಾಡಿಕೊಳ್ಳುತ್ತಾರೆ. ಈ ಧಾವಂತದಲ್ಲಿ ನಾನಿಲ್ಲ ಅಂತ ಒಂದಷ್ಟು ಮಂದಿ ತಮ್ಮ ಪಾಡಿಗೆ ಸುಖವಾಗಿದ್ದಾರೆ. ದೇವಸ್ಥಾನದ ಕಟ್ಟೆಗಳು, ಜಯನಗರದ ಪಾರ್ಕುಗಳು, ಟೀ ಅಂಗಡಿಯ ಜಗಲಿಗಳು, ಸೋಮಾರಿತನದ ಅಡ್ಡೆಗಳು ಜೀವಂತವಾಗಿವೆ. ಯಾರೋ ಎಲ್ಲೋ ಕೂತುಕೊಂಡು ಈ ದಾಂಗುಡಿಯಿಡುವ ಜಗತ್ತಿನ ಹುಚ್ಚು ಹಂಬಲದಿಂದ ದೂರವಿದ್ದುಕೊಂಡು ಕುಮಾರವ್ಯಾಸನನ್ನು ಓದಿ ಸುಖವಾಗಿರುತ್ತಾರೆ.

ಬೆಂಗಳೂರಿನ ಕುರಿತ ಜೋಗಿಯವರ ಕಥಾ ಸರಣಿಯ ಮೂರನೆಯ ಕೃತಿ ಈ ಕಥಾ ಸಂಕಲನ.

 

ಪುಟಗಳು: 144

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !