Click here to Download MyLang App

ವಿವೇಕ ಶಾನಭಾಗ,  ಮತ್ತೊಬ್ಬನ ಸಂಸಾರ,    Vivek Shanbhag,  Mattobbana Samsaara,

ಮತ್ತೊಬ್ಬನ ಸಂಸಾರ (ಇಬುಕ್)

e-book

ಪಬ್ಲಿಶರ್
ವಿವೇಕ ಶಾನಭಾಗ
ಮಾಮೂಲು ಬೆಲೆ
Rs. 95.00
ಸೇಲ್ ಬೆಲೆ
Rs. 95.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಇದು ಡಿಜಿಟಲ್ ಇಬುಕ್ (ಓದುವ ಪುಸ್ತಕ) ಆಗಿದೆ. ಕೊರಿಯರ್ ಮೂಲಕ ಕಳುಹಿಸುವ ಮುದ್ರಿತ ಪುಸ್ತಕವಲ್ಲ, ಖರೀದಿಸಿದ ತಕ್ಷಣ ನಿಮ್ಮ Android ಅಥವಾ iPhone ಮೊಬೈಲ್‌ನಲ್ಲಿ MyLang ಆಪ್ ಮೂಲಕ ಓದಬಹುದು. ಆಪ್ ಲಾಗಿನ್ ಮತ್ತು ಚೆಕ್‌ಔಟ್‌ನಲ್ಲಿ ಒಂದೇ ಫೋನ್ ನಂಬರ್ ಬಳಸಿ.

Please note: This is a digital ebook — not a printed book, so no courier will be sent. Once purchased, it is instantly available to read on the MyLang app on your Android or iPhone. Please use the same phone number for app login and at checkout so your purchase appears in your MyLang bookshelf automatically.

GET FREE SAMPLE

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana
 

 

ಯಾವುದೇ ವಸ್ತುವನ್ನು ಕುರಿತು, ಹಲವು ರೀತಿಯ ಕಥನಗಳನ್ನು ಕಟ್ಟುವುದು ಸಾಧ್ಯ; ಆದರೆ, ಒಂದೇ ಕಥನದಲ್ಲಿ ಹಲವು ಕಥಾಸಾಧ್ಯತೆಗಳನ್ನು ಒಳಗೊಳ್ಳುವುದು ಕಷ್ಟದ ಹಾದಿ. ವಿವೇಕ ಶಾನಭಾಗ ಅವರ ಈಚಿನ ಕಥೆಗಳು, ಈ ಎರಡನೆಯ ಜಾತಿಯ ದುರ್ಗಮ ದಾರಿಗಳನ್ನು ಹುಡುಕಲು ಹೊರಟಂತಿವೆ. ಉದಾಹರಣೆಗೆ, ಈ ಸಂಕಲನದ ಒಂದು ಕಥೆಯಲ್ಲಿ - ‘ಒಬ್ಬ’ನ ಸಾದಾ ಸಂಸಾರದೊಳಗೆ, ಇದ್ದಕ್ಕಿದ್ದಂತೆ ‘ಮತ್ತೊಬ್ಬ’ನ ನೆರಳು ಕಾಣಿಸತೊಡಗುತ್ತದೆ. ಅದಕ್ಕಿಂತ ಭಿನ್ನವಾದ ಇನ್ನೊಂದು ಕಥೆಯಲ್ಲಿ - ಊರಿಗೆಲ್ಲ ‘ನಿಗೂಢ’ವೆನ್ನಿಸುವಾಕೆ, ಮತ್ತೊಮ್ಮೆ ಏನೂ ವಿಶೇಷವಿಲ್ಲದ ಸಾಧಾರಣ ಹೆಂಗಸೂ ಆಗಿ ಕಾಣಿಸಿಕೊಳ್ಳುತ್ತಾಳೆ. ಅದೇ ರೀತಿ - ಶಾಲಾ ಮಾಸ್ತರ, ಕಿರಾಣಿ ಅಂಗಡಿಯಾತ - ಇಂಥ ಪರಿಚಿತರು ಇಲ್ಲಿ ತಟ್ಟನೆ ಅಪರಿಚಿತರೂ ಆಗಿ ಗೋಚರಿಸತೊಡಗುತ್ತಾರೆ. ಶಿರಸಿ, ಕುಮಟಾ, ಅಂಕೋಲಾದ ಸುತ್ತಮುತ್ತಲೇ ಚಿಗುರುವ ಇಲ್ಲಿಯ ಹಲವು ಕಥನಗಳು, ಹಠಾತ್ತನೆ ತಮ್ಮ ಅದೃಶ್ಯ ಬೇರುಗಳನ್ನು ದೂರದೂರದ ಪುಣೆ-ರಂಗೂನಿನವರೆಗೂ ಹಬ್ಬಿಸಿಕೊಳ್ಳತೊಡಗುತ್ತವೆ. ಇಂಥ ಎಲ್ಲ ಕಥನಕ್ರಮಗಳ ಮೂಲಕ ವಿವೇಕರು ಪ್ರಯತ್ನಿಸುತ್ತಿರುವುದಾದರೂ ಏನನ್ನು? ಮೇಲ್ನೋಟಕ್ಕೆ ಒಂದಾಗಿ ಕಾಣುವ ಗ್ರಹೀತ-ವಾಸ್ತವದಲ್ಲಿ ಕಾಲು ನೆಟ್ಟುಕೊಂಡೇ, ಅದರೊಳಗೆ ಹುದುಗಿರುವ ಸಾಧ್ಯ-ವಾಸ್ತವಗಳನ್ನು ಹುಡುಕುವುದು ಈ ಕಥನದ ಪ್ರೇರಣೆಯಾಗಿರಬಹುದೆ? ಅಥವಾ ಇನ್ನೊಂದು ನೆಲೆಯಿಂದ, ದೇಶದೇಶಗಳ ವ್ಯಾಪಾರೋದ್ಯಮಗಳನ್ನು ಜೋಡಿಸತೊಡಗಿರುವ ಇವತ್ತಿನ ತಥಾಕಥಿತ ‘ಜಾಗತಿಕ’ ವ್ಯವಸ್ಥೆಗೆ ಪ್ರತಿಯಾಗಿ, ಇನ್ನೊಂದು ನೆಲೆಯಲ್ಲಿ ನಡೆಯಬಹುದಾದ ಕಾಲಸಂಶ್ಲೇಷಣೆ ಮತ್ತು ಸ್ಮೃತಿಸಂಶ್ಲೇಷಣೆಗಳನ್ನು ಸೂಚಿಸುವುದು ಈ ಕಥೆಗಳ ಆಶಯವಿದ್ದೀತೆ? ಇಂಥ ಹಲವಾರು ತಾತ್ವಿಕ ಪ್ರಶ್ನೆಗಳನ್ನು ಓದುಗರಲ್ಲಿ ಹುಟ್ಟಿಸಬಲ್ಲ ಸಾಮರ್ಥ್ಯ ಈ ಕಥಾಸಂಕಲನಕ್ಕಿದೆ.

- ಅಕ್ಷರ ಕೆ.ವಿ.

 

ಪುಟಗಳು: 134

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !

Customer Reviews

No reviews yet
0%
(0)
0%
(0)
0%
(0)
0%
(0)
0%
(0)