ಪ್ರಕಾಶಕರು: ಛಂದ ಪುಸ್ತಕ
Publisher: Chanda pusthaka
ಹೆಪ್ಪಿನ ಹನಿಯೂ, ನಿಂಬೆಯ ರಸವೂ
ಇದು ಗ್ರಾಮೀಣ ಪ್ರದೇಶದಲ್ಲಿ ಸಾಗುವ ಕಥೆಯಾದ್ದರಿಂದ ರೈತಾಪಿ ಜನರ ಬೆವರುಪ್ಪಿನ ಆಡುಮಾತನ್ನೇ ಇಲ್ಲಿ ಬಳಸಿದ್ದೇನೆ. ಇದು ಮೂರು ಪದರುಗಳಾಗಿ ಬಿಚ್ಚಿಕೊಳ್ಳುವ ಕಥೆ. ಗ್ರಾಮ್ಯ ಜೀವನ, ನಗರೀಕರಣ, ಈ ಎರಡರ ನಡುವೆ ಸಿಲುಕಿ ನಲುಗುತ್ತಿರುವ ಹಳೆ ಮತ್ತು ಹೊಸ ತಲೆಮಾರುಗಳು ಈ ಕಥೆಯಲ್ಲಿ ಕಾಣಸಿಗುತ್ತವೆ. ಹಾಲೆಂಬ ಪದಾರ್ಥವು ಹೆಪ್ಪಿನ ಹನಿಯಿಂದ ಮೊಸರಾಗುವುದಕ್ಕೂ, ನಿಂಬೆಯ ಹನಿಯಿಂದ ಒಡೆದುಹೋಗುವುದಕ್ಕೂ ಇರುವ ವ್ಯತ್ಯಾಸವೇ ಈಗಿನ ಹುಡುಗರಿಗೆ ಗೊತ್ತಿಲ್ಲ. ಹಾಗೆಂದೇ ಈ ಕಥೆ ಬರೆದಿದ್ದೇನೆ. ನಮ್ಮ ಹಳ್ಳಿ ಬಿಟ್ಟು ಐವತ್ತು ವರ್ಷ ದಾಟಿದರೂ, ಅಲ್ಲಿಗೆ ಹೋದಾಗಲೆಲ್ಲಾ ನಾನಿನ್ನೂ ಅಲ್ಲಿಯ ಬೆಳೆಕುಪ್ಪೆ , ದನದ ಕೊಟ್ಟಿಗೆ, ಹುಲ್ಲು ಬಣವೆ, ಎತ್ತಿನಗಾಡಿಗಳ ಸುತ್ತಲೇ ತಿರುಗುತ್ತಿರುತ್ತೇನೆ. ದನಕಾಯುವ ಹುಡುಗರ ಆಟೋಟಗಳು, ಅವರು ಹಾಯಾಗಿ ಅಲೆಯುತ್ತಾ ಹೆಣೆದು ಹಾಡುವ ಪೋಲಿ ಹಾಡುಗಳು ನನ್ನ ಮನದಲ್ಲಿ ಮಾಸದೆ ಈಗಲೂ ಹಸಿರಾಗಿವೆ.
- ಶ್ರೀರಮಣ
ಪುಟಗಳು: 112
ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !