Click here to Download MyLang App

ಬಿ.ಆರ್. ವೆಂಕಟರಮಣ ಐತಾಳ,   ನಾಗಚಂದ್ರನ ರಾಮಚಂದ್ರಚರಿತಪುರಾಣ ಪ್ರವೇಶ,,  Nagachandrana Ramachandra Charitha Purana,  B.R. Venkataramana Aithala,

ನಾಗಚಂದ್ರನ ರಾಮಚಂದ್ರಚರಿತಪುರಾಣ ಪ್ರವೇಶ (ಇಬುಕ್)

e-book

ಪಬ್ಲಿಶರ್
ಬಿ.ಆರ್. ವೆಂಕಟರಮಣ ಐತಾಳ
ಮಾಮೂಲು ಬೆಲೆ
Rs. 60.00
ಸೇಲ್ ಬೆಲೆ
Rs. 60.00
ಬಿಡಿ ಬೆಲೆ
ಇಶ್ಟಕ್ಕೆ 

ಗಮನಿಸಿ: ಮೊಬೈಲ್ ಆಪ್ ಮೂಲಕ ಕೊಳ್ಳುವಾಗ ನಿಮಗೆ ತೊಂದರೆ ಬರುತ್ತಿದ್ದಲ್ಲಿ, ಮೊಬೈಲ್/ಕಂಪ್ಯೂಟರ್ ಬ್ರೌಸರ್ ಬಳಸಿ www.mylang.in ಮೂಲಕ ಕೊಂಡುಕೊಳ್ಳಿ.

Attention: If you are facing problems while buying, please visit www.mylang.in from your mobile/desktop browser to buy

Share to get a 10% discount code now!

GET FREE SAMPLE

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಅಕ್ಷರ ಪ್ರಕಾಶನಕ್ಕೆ ೫೦ ತುಂಬಿದ ೨೦೦೬ನೆಯ ವರ್ಷ, ದಿ| ಕೆ.ವಿ. ಸುಬ್ಬಣ್ಣನವರ ನೆನಪಿಗೆ, ಈ ಹೊಸ ಪುಸ್ತಕಮಾಲೆಯ ಮೊದಲ ಕಂತಿನ ೨೫ ಪುಸ್ತಕಗಳು ಬಿಡುಗಡೆಗೊಂಡವು; ೨೦೦೭ರಲ್ಲಿ ಎರಡನೆಯ ಕಂತಿನ ಇನ್ನೂ ೧೦ ಪುಸ್ತಕಗಳು ಮತ್ತು ೨೦೦೯ರಲ್ಲಿ ಇನ್ನೂ ೧೫ - ಹೀಗೆ ಒಟ್ಟು ೫೦ ಪುಸ್ತಕಗಳು ಈವರೆಗೆ ಈ ಮಾಲಿಕೆಯಲ್ಲಿ ಪ್ರಕಟಗೊಂಡಿವೆ.

ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು - ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ - ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು-ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.

 

ABOUT THE AUTHOR

ಕ್ರಿ.ಶ. ೧೧ನೆಯ ಶತಮಾನದ ಕೊನೆ ಮತ್ತು ೧೨ನೆಯ ಶತಮಾನದ ಆದಿಯಲ್ಲಿ ಜೀವಿಸಿದ್ದ ನಾಗಚಂದ್ರ ವಿಜಯಪುರ (ಈಗಿನ ಬಿಜಾಪುರ) ಪ್ರಾಂತ್ಯದಲ್ಲಿ ಬದುಕಿದವನೆಂದು ಊಹೆ. ಜೈನಮತದ ನಿಷ್ಠ ಅನುಯಾಯಿಯಾಗಿದ್ದ ಈತನ ಗುರುಪರಂಪರೆಯಲ್ಲಿ ಮುಖ್ಯರು ಬಾಲಚಂದ್ರ ಮೇಘಚಂದ್ರ ಯತಿಗಳು. ಪಂಪ-ಪೊನ್ನ-ರನ್ನರಂತೆಯೇ ಈತನೂ ಎರಡು ಮಹಾಕಾವ್ಯಗಳನ್ನು ರಚಿಸಿದ್ದಾನೆ - ‘ಮಲ್ಲಿನಾಥ ಪುರಾಣ’ ಮತ್ತು ‘ರಾಮಚಂದ್ರಚರಿತಪುರಾಣ’. ರಾಮಾಯಣವನ್ನು ಜೈನಪರಂಪರೆಯ ಅನುಸಾರ ಪುನರ್‌ವ್ಯಾಖ್ಯಾನಕ್ಕೆ ಒಳಪಡಿಸಿರುವುದು ‘ರಾಮಚಂದ್ರಚರಿತಪುರಾಣ’ ಕೃತಿಯ ವಿಶಿಷ್ಟ ಅಂಶ. ಪಂಪನ ಮೇಲಿನ ಅಭಿಮಾನದಿಂದ ತನ್ನನ್ನು ಅಭಿನವ ಪಂಪ ಎಂದು ಕರೆದುಕೊಂಡ ಈ ಕವಿಯು ಮುಖ್ಯವಾಗಿ ಭಕ್ತಿ-ವೈರಾಗ್ಯಗಳನ್ನು ಕೇಂದ್ರೀಕರಿಸಿ ಕಾವ್ಯಗಳನ್ನು ರಚಿಸಿದ್ದಾನೆ. ಭಾರತೀಕರ್ಣಪೂರ, ಕವಿತಾಮನೋಹರ, ಸಾಹಿತ್ಯವಿದ್ಯಾಧರ, ಜನಸ್ಥಾನರತ್ನಪ್ರದೀಪ, ಸೂಕ್ತಿಮುಕ್ತಾವಸಂತ ಮೊದಲಾದ ಬಿರುದುಗಳು ಈತನಿಗಿದ್ದವು. ‘ಜಿನಮುನಿತನಯ’, ‘ಜಿನಾಕ್ಷರಮಾಲೆ’ ಎಂಬ ಗ್ರಂಥಗಳನ್ನೂ ಈತ ರಚಿಸಿದನೆಂದು ಉಲ್ಲೇಖವಿದೆ.

 

ಪುಟಗಳು: 128

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !