
ಪ್ರಕಾಶಕರು: ನಾಗು ಸ್ಮಾರಕ ಪ್ರಕಾಶನ
Publisher: Naagu Smaraka Prakashana
ಬರೆದವರು ಮತ್ತು ಓದಿದವರು: ಸಿ.ಪಿ. ನಾಗರಾಜ
ಆಡಿಯೋ ಪುಸ್ತಕದ ಅವಧಿ : 4 ಗಂಟೆ 54 ನಿಮಿಷ
ಸರ್ವಜ್ಞ (ಸಂಸ್ಕೃತದಲ್ಲಿ ಎಲ್ಲವನ್ನೂ ತಿಳಿದವ ಎನ್ನಲಾಗಿದೆ). ಈತ ಕನ್ನಡದ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ. ಪ್ರಮುಖವಾಗಿ ತ್ರಿಪದಿಗಳೆಂಬ ಮೂರು ಸಾಲಿನ ವಚನಗಳನ್ನು ರಚಿಸಿರುವ ಈತನ ಕಾಲದ ಕುರಿತು ಹೆಚ್ಚು ತಿಳಿದಿಲ್ಲ. ಇತರ ಲೇಖಕರು ಅವನ ಬಗ್ಗೆ ಮಾಡಿರುವ ಪ್ರಸ್ತಾಪಗಳಿಂದ ಮತ್ತು ಸರ್ವಜ್ಞನ ಭಾಷಾ ಪ್ರಯೋಗದ ಲಕ್ಷಣಗಳ ಅಧ್ಯಯನದಿಂದ ಈತನು ಜೀವಿಸಿದ್ದ ಕಾಲ ಸುಮಾರಾಗಿ ೧೭ನೇ ಶತಮಾನದ ಆದಿಭಾಗ ಎಂದು ಪ್ರತಿಪಾದಿಸಲಾಗಿದೆ. ಪ್ರಾಯಶಃ ಪುಷ್ಪದತ್ತ ಈತನ ನಿಜನಾಮವಾಗಿದ್ದು, ಸರ್ವಜ್ಞ ಎಂಬುದು ಈತನ ಕಾವ್ಯನಾಮ.
ಒಟ್ಟು ಸುಮಾರು ೧,೦೦೦ ತ್ರಿಪದಿಗಳು ಸರ್ವಜ್ಞನ ಹೆಸರಿನಲ್ಲಿ ದಾಖಲಾಗಿವೆ. ಸರ್ವಜ್ಞನ ತ್ರಿಪದಿಗಳು ತಮ್ಮ ಸರಳತೆ ಮತ್ತು ಪ್ರಾಸಬದ್ಧತೆಯಿಂದ ಜನಪ್ರಿಯವಾಗಿವೆ. ಈ ತ್ರಿಪದಿಗಳು ಮುಖ್ಯವಾಗಿ ನೈತಿಕ, ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳನ್ನು ಕುರಿತವು.
ಸಿ.ಪಿ.ನಾಗರಾಜ ಅವರು ಇವುಗಳಲ್ಲಿ ಕೆಲವು ವಚನಗಳನ್ನು ಕೈಗೆತ್ತಿಕೊಂಡು ಅರ್ಥಪೂರ್ಣವಾಗಿ ವಿವರಿಸಿದ್ದಾರೆ.
ಈಗ ಸಿ.ಪಿ.ನಾಗರಾಜ ಅವರದ್ದೇ ದನಿಯಲ್ಲಿ ಕೇಳಿ ನಿಮ್ಮ ಮೈಲ್ಯಾಂಗ್ ಮೊಬೈಲ್ ಆಪ್ ಅಲ್ಲಿ ಮಾತ್ರ.