Click here to Download MyLang App

ಉಯ್ಯಾಲೆ (ಪ್ರಿಂಟ್ ಪುಸ್ತಕ)

ಉಯ್ಯಾಲೆ (ಪ್ರಿಂಟ್ ಪುಸ್ತಕ)

printed book

ಪಬ್ಲಿಶರ್
ಚದುರಂಗ
ಮಾಮೂಲು ಬೆಲೆ
Rs. 200.00
ಸೇಲ್ ಬೆಲೆ
Rs. 200.00
ಬಿಡಿ ಬೆಲೆ
ಇಶ್ಟಕ್ಕೆ 

 ಸರ್ವಮಂಗಳೆಯನ್ನು ಸೃಷ್ಟಿಸಿ ಓದುಗರ ಮನಸ್ಸನ್ನು ತಮ್ಮತ್ತ ಸೆಳೆದುಕೊಂಡ ಗೆಳೆಯ ಚದುರಂಗರು ರಾಧೆಯನ್ನು, ಶೇಷಗಿರಿಯನ್ನು, ಕೃಷ್ಣೇಗೌಡರನ್ನು, ಪ್ರಭಾವತಿಯನ್ನು - ಜೀವಂತವಾಗಿ ಹಲವು ಪಾತ್ರಗಳನ್ನು - ನಮ್ಮ ಮುಂದೆ ನಿಲ್ಲಿಸಿದ್ದಾರೆ. ಸುಂದರಿ ರಾಧೆ, ಪುಸ್ತಕಪ್ರಿಯ ಶೇಷಗಿರಿ, ಜೀವನೋಲ್ಲಾಸಿ ಕೃಷ್ಣೇಗೌಡ, ಸುಕುಮಾರಿ ಮುಗ್ದೆ ಪ್ರಭಾವತಿ, ಒಳ್ಳೆಯವನಾದರೂ ಪುಸ್ತಕದ ಹಾಳೆಯಲ್ಲಿ ಹುದುಗಿ, ಹೆಂಡತಿ ರಾಧೆಯ ಸುತ್ತ ಅಸಹನೆಯ ಕೋಟೆ ಬೆಳೆಯಲು ಕಾರಣನಾಗಿ ಓದುಗರಿಂದ ಸಹಾನುಭೂತಿಯ ನಿಟ್ಟುಸಿರನ್ನು ಸಂಪಾದಿಸುವ ಶೇಷಗಿರಿ, ರಾಧೆ-ಶೇಷಗಿರಿಗಳ ನಡುವೆ ಬಂದು, ಪ್ರಭಾವತಿಯ ಪ್ರೀತಿಯನ್ನೂ ರಾಧೆಯ ಒಲವನ್ನೂ ಗಳಿಸಿ, ಅವರ ಸಂಸಾರದಲ್ಲಿ ಸ್ನೇಹದ ಒರತೆಯನ್ನು ಹರಿಸಲೆತ್ನಿಸಿದ ಕೃಷ್ಣೇಗೌಡ, ಜನ್ಮತಃ ಕಲಾವಿದೆಯಾದ ಪುಟ್ಟ ಪ್ರಭಾವತಿ. ಹೀಗೆ ಈ ಪಾತ್ರಗಳು ನಿಚ್ಚಳವಾಗಿ ನಿಲ್ಲುತ್ತವೆ. ರಾಧೆ ಕೃಷ್ಣೇಗೌಡರು ಪರಸ್ಪರ ಆಕರ್ಷಣೆಗೆ ಗುರಿಯಾಗಿದ್ದಾಗ ಬರುವ ಹಾವಿನ ಪ್ರಸಂಗ ಎಷ್ಟು ಎದೆ ನಡುಗಿಸುವುದೋ ಅಷ್ಟೇ ಮಾರ್ಮಿಕವಾಗಿದೆ. ಚದುರಂಗರು ಪ್ರಯತ್ನಿಸಿದರೆ ಮನಸ್ಸಿನ ಅಂತರಾಳದ ನಾನಾ ಪದರಗಳನ್ನು ಬಿಚ್ಚಿರಿಸಬಲ್ಲರು ಎಂಬುದಕ್ಕೆ ಇದು ದ್ಯೋತಕವಾಗಿದೆ.

ಎಚ್ಚೆಸ್ಕೆ.

 

ಪುಟಗಳು: 252

 


Customer Reviews

No reviews yet
0%
(0)
0%
(0)
0%
(0)
0%
(0)
0%
(0)